ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ನಾಡಿನ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ(94) ನಿಧನರಾಗಿದ್ದಾರೆ.
ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಸಾಹಿತಿ, ಪದ್ಮಭೂಷಣ ಎಸ್.ಎಲ್ ಭೈರಪ್ಪ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ. ಎಸ್ ಎಲ್ ಭೈರಪ್ಪ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಪರ್ವ ಗೃಹಭಂಗ, ವಂಶವೃಕ್ಷ, ನೆಲೆ, ತಪ್ಪಲಿಯು ನೀನಾದೆ ಮಗನೆ ಕಾದಂಬರಿಗಳನ್ನ ಎಸ್ ಎಲ್ ಭೈರಪ್ಪ ರಚಿಸಿದ್ದಾರೆ. 1975ರಲ್ಲಿ ದಾಟು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು.
Key words: SL Bhairappa, passes away