ಸಾಹಿತಿ ಎಸ್ ಎಲ್ ಭೈರಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ

ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಹಿರಿಯ ಸಾಹಿತಿ, ಕಾದಂಬರಿಕಾರ ಸಾಹಿತಿ ಎಸ್ ಎಲ್ ಭೈರಪ್ಪ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,  ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿ, ಇಹದ “ಯಾನ” ಅಂತ್ಯ.. ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್.‌ ಭೈರಪ್ಪನವರು ಇಂದು ವಿಧಿವಶರಾಗಿದ್ದು ಬಹಳ ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Key words: CM Siddaramaiah, DCM, DK Shivakumar, condole, death, SL Bhyrappa