ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಪ್ರಶ್ನಿಸಿ PIL:  ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ರಾಜ್ಯ ಸರ್ಕಾರ ನಡೆಸುತ್ತಿರುವ  ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್  ನಾಳೆಗೆ ಮುಂದೂಡಿದೆ.

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ರಾಜ್ಯ ಒಕ್ಕಲಿಗರಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ವೀರಶೈವ ಲಿಂಗಾಯಿತ ಮಹಾಸಭಾ ಸದಸ್ಯರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಸಿಜೆ ಬಖ್ರು, ನ್ಯಾ.ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.

ವಿಚಾರಣೆ ವೇಲೆ ಹಿಂದುಳಿದ ವರ್ಗಗಳ ಆಯೋಗದ ಪರ ವಕೀಲರ ವಾದ ಮಂಡನೆ ಮುಕ್ತಾಯವಾಗಿದ್ದು ವಿಚಾರಣೆಯನ್ನ ವಿಭಾಗೀಯ ಪೀಠ ನಾಳೆಗೆ ಮುಂದೂಡಿಕೆ ಮಾಡಿದೆ.

Key words: social, educational survey, PIL, High Court, adjourns, hearing