ಬೆಂಗಳೂರು,ಸೆಪ್ಟಂಬರ್,25,2025 (www.justkannada.in): ಕನ್ನಡದ ಹಿರಿಯ ಖ್ಯಾತ ಸಾಹಿತಿ ಎಸ್‌ಎಲ್ ಭೈರಪ್ಪ ಅವರ ಅಂತಿಮ ದರ್ಶನವನ್ನ ಸಿಎಂ ಸಿದ್ದರಾಮಯ್ಯ ಪಡೆದರು.
ಎಸ್ ಎಲ್ ಭೈರಪ್ಪ ಅವರ ಪಾರ್ಥೀವವನ್ನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಇಲ್ಲಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಎಸ್‌ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಈ ವೇಳೆ ಸಚಿವ ಶಿವರಾಜ ತಂಗಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಡಿಸಿಎಂ ಡಿಕೆ ಶಿವಕುಮಾರ್ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಅವರು ಸಹ ಎಸ್.ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಇಂದು ಮಧ್ಯಾಹ್ನದ ವೇಳೆಗೆ ಮೈಸೂರಿಗೆ ಭೈರಪ್ಪ ಅವರ ಪಾರ್ಥಿವ ಶರೀರ ಸ್ಥಳಾಂತರಿಸಲಾಗುತ್ತದೆ. ನಾಳೆ ಮೈಸೂರು ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
Key words: CM Siddaramaiah, writer, SL Bhyrappa, Bangalore