ಬೆಂಗಳೂರು, ಸೆಪ್ಟೆಂಬರ್, 25,2025 (www.justkannada.in): ಹಿರಿಯ ಸಾಹಿತಿ, ಕಾದಂಬರಿಕಾರ ಎಸ್ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್ ಎಲ್ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.
ಅಪಾರ ಓದುಗರನ್ನ ಸಂಪಾದಿಸಿದವರು ಭೈರಪ್ಪನವರು. ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರದ್ದು ಜಗತ್ ಪ್ರಸಿದ್ಧ ಆಗಿರುವಂತಹ ಕಾದಂಬರಿಗಳು. ಅವರ, ಕೆಲವು ಕಾದಂಬರಿಗಳನ್ನು ನಾನು ಓದಿದ್ದೇನೆ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Key words: Government, green signal, construction, memorial, writer, SL Bhyrappa