ಹೈಕೋರ್ಟ್‌ ನಿರ್ದೇಶನದಂತೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ : ಸಚಿವ ಶಿವರಾಜ ತಂಗಡಗಿ

ಬೆಂಗಳೂರು, ಸೆಪ್ಟಂಬರ್,26,2025 (www.justkannada.in): ಹೈಕೋರ್ಟ್‌ ನಿರ್ದೇಶನದಂತೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ,  ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಹೈಕೋರ್ಟ್‌ ನೀಡಿರುವ ನಿರ್ದೇಶನಗಳನ್ನು ತಪ್ಪದೇ ಪಾಲಿಸುತ್ತೇವೆ. ನ್ಯಾಯಾಲಯವನ್ನು ನಾವು ಗೌರವಿಸುತ್ತೇವೆ. ಅಲ್ಲಿನ ಆದೇಶಗಳನ್ನು ಚಾಚೂ ತಪ್ಪದೆ ಪಾಲಿಸುತ್ತೇವೆ ಎಂದರು.

ಸಮೀಕ್ಷೆಯಲ್ಲಿ ಭಾಗವಹಿಸಿ ಮಾಹಿತಿ ನೀಡುವಂತೆ ಯಾರನ್ನೂ ಒತ್ತಾಯಿಸಬಾರದು.  ಇಚ್ಛೆ ಇರುವವರು ಮಾಹಿತಿ ನೀಡಬಹುದು, ನೀಡದೇ ಇದ್ದರೆ ಬಲವಂತ ಪಡಿಸುವುದಿಲ್ಲ. ಹೀಗೆ ಬರೆಸಬೇಕೆಂದು ನಾವು ಯಾರ ಮೇಲೂ ಒತ್ತಡ ಹಾಕುವುದಿಲ್ಲ. ಸಮೀಕ್ಷೆಯಲ್ಲಿ ಎಲ್ಲಾ ಶಿಕ್ಷಕರೂ ಭಾಗವಹಿಸುತ್ತಿದ್ದು,  ಗೈರಾಗುವವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ನಿನ್ನೆ ಸಚಿವ ಸಂಪುಟ ಸಭೆಯಲ್ಲಿ  ನಿರ್ಧರಿಸಲಾಗಿದೆ ಎಂದರು.

Key words: Social and educational, survey , High Court, Minister, Shivaraj Thangadgi