ಬಾಗಲಕೋಟೆ,ಸೆಪ್ಟಂಬರ್,27,2025 (www.justkannada.in): ಭಾರೀ ಮಳೆಗೆ ಮನೆಯ ಗೋಡೆ ಕುಸಿದು 11 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಾಪುರದಲ್ಲಿ ನಡೆದಿದೆ.
ಗ್ರಾಮದ ನಾಗಪ್ಪ ಲಾತೂರ್ ಎಂಬುವವರ ಮಗ ದರ್ಶನ್ (11) ಮೃತಪಟ್ಟ ಬಾಲಕ. ಮತ್ತೊಬ್ಬ ಬಾಲಕ ಶ್ರೀಶೈಲಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಮಕ್ಕಳು ತನ್ನ ತಾಯಿಯ ಜೊತೆ ಮನೆಯ ಕೋಣೆಯಲ್ಲಿ ಮಲಗಿದ್ದರು.
ಈ ಮಧ್ಯೆ ಇಂದು ಬೆಳಿಗ್ಗೆ 5 ಗಂಟೆ ವೇಳೆಗೆ ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ದರ್ಶನ್ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: Boy, dies ,roof, collapses , heavy rain