ಎರಡು ಬೈಕ್ ನಡುವೆ ಭೀಕರ ಅಪಘಾತ: ಮೂವರು ಸಾವು

ತುಮಕೂರು,ಸೆಪ್ಟಂಬರ್,29,2025 (www.justkannada.in): ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ  ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ.

ಶಿರಾದ ಸಾಯಿ ಡಾಬಾ ಬಳಿ ಈ ಘಟನೆ ನಡೆದಿದೆ. ವಿಷ್ಣು(28),  ಮುತ್ತುರಾಜ್ ಸೇರಿ ಮೂವರು ಮೃತಪಟ್ಟವರು.  ಹೊಂಡಾ ಆಕ್ಟಿವಾ ಹಾಗೂ ಇನ್ನೊಂದು ಬೈಕ್ ಗಳ ನಡುವೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಪರಿಣಾಮ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಶೀರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: horrific, accident, between, two bikes, Three death