ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಇಬ್ಬರ ಬಂಧನ: ಬರೊಬ್ಬರಿ 7.80 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

ಬೆಂಗಳೂರು, ಸೆಪ್ಟೆಂಬರ್,​ 29,2025 (www.justkannada.in): ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಬರೋಬ್ಬರಿ 7.80 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ.

ಕೆವಿನ್ ರೋಜರ್, ಥಾಮಸ್ ನವೀದ್ ಚೀಮ್  ಬಂಧಿತ ಆರೋಪಿಗಳು. ಬಂಧಿತರಿಂದ 3.8 ಕೆಜಿ ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಬ್ರೌನ್ ಹಾಗೂ ವೈಟ್ ಡ್ರಗ್ಸ್, 42 ಗ್ರಾಂ ತೂಕದ 82 ಎಕ್ಸಟೆಸಿ ಮಾತ್ರೆಗಳು, 23 ಕೆ.ಜಿ. ಗಾಂಜಾ ಹಾಗೂ 482 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ.

ದೆಹಲಿ ಮತ್ತು ಮುಂಬಯಿಂದ ಆರೋಪಿಗಳು ಡ್ರಗ್ಸ್​ ತರಿಸಿಕೊಳ್ಳುತ್ತಿದ್ದರು ಎನ್ನಲಾಗಿದ್ದು,  ಹೆಬ್ಬಗೋಡಿಯಲ್ಲಿ ಮನೆ ಮಾಡಿದ್ದ ಆರೋಪಿಗಳು, ಪರಿಚಿತ ಸ್ಥಳಗಳಲ್ಲಿ ಡ್ರಗ್ಸ್ ಪಾರ್ಸೆಲ್ ಇಟ್ಟು ಲೊಕೇಶನ್​ ಶೇರ್​ ಮಾಡಿ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಟೆಕ್ಕಿಗಳು, ವಿದ್ಯಾರ್ಥಿಗಳೇ ಇವರ ಟಾರ್ಗೆಟ್​ ಆಗಿತ್ತು ಎನ್ನಲಾಗಿದೆ. ಇದೀಗ ಸಿಸಿಬಿ ಹಾಗೂ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

Key words: Two, arrested, drug, Rs 7.80 crore , Drugs, worth, seized