ಬೆಂಗಳೂರು,ಸೆಪ್ಟಂಬರ್,29,2025 (www.justkannada.in): ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನ ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿರುವ ಆದೇಶ ರದ್ದು ಮಾಡುವಂತೆ ಕೋರಿ ಹೋರಾಟಗಾರ ಮಹೇಶ್ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಚೆನ್ನಯ್ಯನಿಗೆ ಆಶ್ರಯ ನೀಡಿದ್ದ ಮಹೇಶ್ ತಿಮರೋಡಿ ವಿರುದ್ದ 32 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ಮಹೇಶ್ ತಿಮರೋಡಿ ಅವರನ್ನ ರಾಯಚೂರು ಜಿಲ್ಲೆ ಮಾನ್ವಿಗೆ 1 ವರ್ಷದವರೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.
ಈ ಹಿನ್ನೆಲೆಯಲ್ಲಿ ಈ ಗಡಿಪಾರು ಆದೇಶ ರದ್ದುಗೊಳಿಸುವಂತೆ ಕೋರಿ ಮಹೇಶ್ ತಿಮರೋಡಿ ಹೈಕೋರ್ಟ್ ಮೊರೆ ಹೋಗಿದ್ದು ನಾಳೆ ವಿಚಾರಣೆ ನಡೆಯುವ ಸಾಧ್ಯತೆ ಇದೆ.
Key words: Mahesh Timarodi, High Court ,against ,exile order