ಕಲಬುರಗಿ,ಸೆಪ್ಟಂಬರ್,30,2025 (www.justkannada.in): ಕಲ್ಯಾಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.
ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭೀಮಾ ಹಾಗೂ ಕೃಷ್ಣಾ ನದಿಗಳಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿದರು.
ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು.
ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು.
ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿ ಮೊದಲ ಸುತ್ತಿನ ವೈಮಾನಿಕ ಸಮೀಕ್ಷೆಗೆ ತೆರಳಿದರು. ಇದಾದ ಬಳಿಕ ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆಯನ್ನು ಮಧ್ಯಾಹ್ನ ಕೈಗೊಂಡರು.
Key words: CM Siddaramaiah, conducts, aerial survey, flood-affected areas