ವಿಜಯಪುರ,ಸೆಪ್ಟಂಬರ್,30,2025 (www.justkannada.in): ಸೀನಾ ಕಣಿವೆಯಲ್ಲಿ ಪ್ರವಾಹ ಉಂಟಾಗಿದ್ದು, ಪ್ರವಾಹದಿಂದ ವಿಜಯಪುರ ಜಿಲ್ಲೆಯಲ್ಲಿ 2.5 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಸೀನಾ ಕಣಿವೆಯಲ್ಲಿ ಪ್ರವಾಹ ಉಂಟಾಗಿದೆ. ಸೀನಾ ಜಲಾಶಯದ ಸಾಮರ್ಥ್ಯ ಕಡಿಮೆಯಿದೆ. ಹೀಗಾಗಿ ಭೀಮಾನದಿಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಬಿಡಲಾಗಿದೆ. ಭೀಮಾನದಿಗೆ ನೀರು ಬಿಟ್ಟಿದ್ದರಿಂದ ಹಳ್ಳಿಗಳು ಮುಳುಗಡೆಯಾಗಿದೆ.
ವಿಜಯಪುರ ಜಿಲ್ಲೆಯ 2.5 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ವಿಜಯಪುರ ಜಿಲ್ಲೆಯಲ್ಲೇ ಅತಿಹೆಚ್ಚು ಮಳೆಯಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜತೆ ಈ ಭಾಗದ ಸಚಿವರು ಚರ್ಚೆ ಮಾಡುತ್ತೇವೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
Key words: Floods, rain, crops, damaged, Vijayapura district, Minister M.B. Patil