ಮತ್ತೊಂದು ವಿಶ್ವ ದಾಖಲೆಗೆ ‘ಶಕ್ತಿ ಯೋಜನೆ’ ಸೇರ್ಪಡೆ: ಧನ್ಯವಾದ ತಿಳಿಸಿದ ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು, ಅಕ್ಟೋಬರ್​ ,1,2025 (www.justkannada.in): ರಾಜ್ಯಸರ್ಕಾರದ ಪಂಚಗ್ಯಾರಂಟಿ ಯೋಜನೆಗಳಲ್ಲಿ ಒಂದಾದ  ಶಕ್ತಿ ಯೋಜನೆ ಇದೀಗ ಮತ್ತೊಂದು ವಿಶ್ವದಾಖಲೆಗೆ ಸೇರ್ಪಡೆಗೊಂಡಿದೆ.

‘ಶಕ್ತಿ ಯೋಜನೆ’ಗೆ ಇಂಟರ್​​ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್​ ಗರಿ ಲಭಿಸಿದ್ದು ಈ ಹಿನ್ನೆಲೆ ಮಹಿಳಾ ಪ್ರಯಾಣಿಕರು ಸೇರಿದಂತೆ ನಾಲ್ಕು ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಧನ್ಯವಾದ ತಿಳಿಸಿದ್ದಾರೆ. ಶಕ್ತಿ ಯೋಜನೆ ವಿಶ್ವ ದಾಖಲೆಗೆ ಸೇರ್ಪಡೆಗೊಂಡ ಬಗ್ಗೆ ಕೆಎಸ್​​​ಆರ್​​ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ರಾಮಲಿಂಗರೆಡ್ಡಿ, ಮಹಿಳೆಯರನ್ನು ಆರ್ಥಿಕ, ‌ಸಾಮಾಜಿಕ‌, ಔದ್ಯೋಗಿಕವಾಗಿ ಸಬಲರನ್ನಾಗಿಸಿದೆ‌. ಶಕ್ತಿ ಯೋಜನೆ ದೇಶದ ವಿವಿಧ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಿರುವುದು ಶಕ್ತಿ ಯೋಜನೆಯ ಯಶಸ್ಸು ಬಿಂಬಿಸಿದೆ. ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯ. ಈ ಹಿನ್ನೆಲೆ ನಾಲ್ಕು ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರು ಮತ್ತು ಮಹಿಳಾ ಪ್ರಯಾಣಿಕರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ 2023 ಜೂನ್ 11 ರಂದು ಪ್ರಾರಂಭಿಸಿದ್ದ ಶಕ್ತಿ ಯೋಜನೆ ಅಡಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ನಾಲ್ಕು ಸಾರಿಗೆ ಸಂಸ್ಥೆಯಲ್ಲಿ ಉಚಿತವಾಗಿ ಮಹಿಳೆಯರು 500 ಕೋಟಿಗೂ ಹೆಚ್ಚು ಪ್ರಯಾಣ ಮಾಡಿದ್ದಾರೆ.   ​​

Key words: ‘Shakti Yojana, another, world record, Minister, Ramalingareddy