ಮೈಸೂರು,ಅಕ್ಟೋಬರ್,2,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು ಸಾಂಸ್ಕೃತಿಕ ನಗರಿ ಸಜ್ಜಾಗಿದೆ. ಈ ನಡುವೆ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಕುಂಭ ಲಗ್ನದಲ್ಲಿ ಸಂಜೆ 4.42ರಿಂದ 5.06 ವರೆಗಿನ ಶುಭ ಮುಹೂರ್ತದಲ್ಲಿ ಚಿನ್ನದ ಅಂಬಾರಿಯಲ್ಲಿ ಆಸೀನಳಾಗಿರುವ ಚಾಮುಂಡೇಶ್ವರಿ ತಾಯಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಆರಂಭಗೊಳ್ಳಲಿದೆ. 6ನೇ ಬಾರಿಗೆ ಅಭಿಮನ್ಯು ಚಿನ್ನದ ಅಂಬಾರಿಯನ್ನು ಹೊರಲಿದೆ. ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪಾ ಸಾಥ್ ನೀಡಲಿವೆ.
ಇನ್ನು ಸಿಎಂ ಸಿದ್ದರಾಮಯ್ಯ 8ನೇ ಬಾರಿಗೆ ಜಂಬೂ ಸವಾರಿಗೆ ಚಾಲನೆ ನೀಡುವ ಮೂಲಕ ಅತಿ ಹೆಚ್ಚು ಬಾರಿ ಜಂಬೂ ಸವಾರಿಗೆ ಚಾಲನೆ ನೀಡಿದ ಕೀರ್ತಿ ಪಡೆಯಲಿದ್ದಾರೆ. ಈ ಬಾರಿ ಜಂಬೂ ಸವಾರಿಯಲ್ಲಿ 58 ಸ್ತಬ್ದಚಿತ್ರಗಳು ಪ್ರದರ್ಶನಗೊಳ್ಳಲಿದೆ. 100ಕ್ಕೂ ಹೆಚ್ಚು ಕಲಾ ತಂಡಗಳು, 60ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು, ಅಶ್ವಾರೋಹಿ ದಳ, ಪೊಲೀಸ್ ಬ್ಯಾಂಡ್ ಹಾಗೂ ಪೊಲೀಸ್ ತುಕಡಿಗಳು ಸಾಗಲಿವೆ.
Key words: Countdown, Mysore Dasara, Jumbo Savari