ಮೈಸೂರು, ಅಕ್ಟೋಬರ್ 2,2025 (www.justkannada.in): ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆ ಮಾಡಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.
ಇಂದು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು, ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ ಅವರು ಎಂದು ಲಾಲ್ ಬಹಾದ್ದೂರ್ ಶಾಸ್ತ್ರೀ ಜಿಯವರನ್ನು ಸ್ಮರಿಸಿದರು
ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಶುಭಾಶಯಗಳು. ಕಾಕತಾಳೀಯ ಎಂಬಂತೆ ಇಂದು ವಿಜಯದಶಮಿಯೂ ಕೂಡಾ ಬಂದಿದ್ದು, ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಶುಭಾಶಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
Key words: sacrifices, Gandhiji, Lal bahaddur Shastri , CM Siddaramaiah, Mysore