ಬೆಳಗಾವಿ, ಅಕ್ಟೋಬರ್,3,2025 (www.justkannada.in): ಕಾಂಗ್ರೆಸ್ ಹೈಕಮಾಂಡ್ ದುರ್ಬಲವಾಗಿದೆ. ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಸೆಡ್ಡು ಹೊಡೆದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಲೇವಡಿ ಮಾಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಟಿ ರವಿ, ಸಿಎಂ ಬದಲಾವಣೆ ಬಗ್ಗೆ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದು ಮೊದಲು ಹೇಳಿದ್ದರು. ಈಗ ಸಿದ್ದರಾಮಯ್ಯ ನಾನೇ ಸಿಎಂ ನಾನೇ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಹೈಕಮಾಂಡ್ ಗೆ ಸೆಡ್ಡು ಹೊಡೆದಿದ್ದಾರೆ. ಒಬ್ಬರು ಭ್ರಷ್ಟ ಹೋಗಿ ಮತ್ತೊಬ್ಬರು ಭ್ರಷ್ಟ ಬಂದರೆ ಒಳ್ಳೆಯದಲ್ಲ ಎಂದರು.
ಕಾಂಗ್ರೆಸ್ ಹೈಕಮಾಂಡ್ ದುರ್ಬಲದ ಸಂಕೇತ ಎಂದು ಸಿಟಿ ರವಿ ವ್ಯಂಗ್ಯವಾಡಿದರು.
Key words: CM Siddaramaiah, Congress, high command, C.T. Ravi