ಬೆಂಗಳೂರು,ಅಕ್ಟೋಬರ್,3,2025 (www.justkannada.in): ಅನಾರೋಗ್ಯದಿಂದ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್ಮೇಕರ್ ಅನ್ನು ಯಶಸ್ವಿಯಗಿ ಅಳವಡಿಸಲಾಗಿದೆ. ಶೀಘ್ರದಲ್ಲೇ ಚೇತರಿಸಿಕೊಂಡ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಮಲ್ಲಿಕಾರ್ಜುನ ಖರ್ಗೆ ಅವರು ಆರೋಗ್ಯವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಈ ನಡುವೆ ಇಂದು ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಲ್ಲಿಕಾರ್ಜುನ ಖರ್ಗೆ ಅವ ಆರೋಗ್ಯ ವಿಚಾರಿಸಿದ್ದಾರೆ. ಸುರ್ಜೇವಾಲರಿಗೆ ಸಚಿವ ಕೆ.ಜೆ ಜಾರ್ಜ್, ಶಾಸಕ ಹ್ಯಾರೀಸ್ ಸಾಥ್ ನೀಡಿದ್ದಾರೆ.
Key words: Ranadeep Singh Surjewala, health, Mallikarjuna kharge