ಮಹಾತ್ಮ ಗಾಂಧೀಜಿ ಅವರ ಸಂದೇಶಗಳು ಇಂದಿಗೂ ಪ್ರಸ್ತುತ- ಕೆ.ಎಂ. ಮುನಿಗೋಪಾಲ್‌ ರಾಜು

ಮೈಸೂರು, ಅಕ್ಟೋಬರ್‌, 03, 2025 (www.justkannada.in): ಗಾಂಧೀಜಿ ಅವರು ನೀಡಿರುವ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದೆ ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ತಿಳಿಸಿದರು.

ನಗರದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯನ್ನು ಆಚರಿಸಲಾಯಿತು.

ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರೊಂದಿಗೆ ಪ್ರಮುಖ ಅಧಿಕಾರಿಗಳು ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಂ. ಮುನಿಗೋಪಾಲ್‌ ರಾಜು ಅವರು, ಮಹಾತ್ಮ ಗಾಂಧೀಜಿ ಅವರು ನೀಡಿರುವ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದೆ. ಗಾಂಧೀಜಿ ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ದೇಶದ ಪ್ರತಿಯೊಬ್ಬರು ಜವಾಬ್ದಾರಿಯಿಂದ ನಡೆಯಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಸೆಸ್ಕ್‌ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್‌, ಮೈಸೂರು ವಲಯ ಕಚೇರಿಯ ಮುಖ್ಯ ಇಂಜಿನಿಯರ್‌ ಮೃತ್ಯುಂಜಯ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಪ್ರಧಾನ ವ್ಯವಸ್ಥಾಪಕರಾದ(ಖರೀದಿ) ಎಲ್‌. ಲೋಕೇಶ್‌, ಪ್ರಧಾನ ವ್ಯವಸ್ಥಾಪಕ (ಐಟಿ ಮತ್ತು ಎಂಐಎಸ್) ರಾಮಸ್ವಾಮಿ, ಪ್ರಧಾನ ವ್ಯವಸ್ಥಾಪಕರಾದ (ಆಯವ್ಯಯ ಮತ್ತು ಸಂಪನ್ಮೂಲ) ಎಸ್‌. ಪೂರ್ಣಿಮಾ, ಉಪ ಪ್ರಧಾನ ವ್ಯವಸ್ಥಾಪಕರಾದ ಎಸ್‌.ಆರ್.‌ ಮೋಹನ್‌, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಟಿ.ಜಿ. ಸುಭಾಷ್‌, ಅನೀಶ್‌ ಪಾತಕ್‌ ಸೇರಿದಂತೆ ಇತರರಿದ್ದರು.

Key words: Mysore, Gandhi Jayanti, celebration, Cesc ,office