ಸಿಎಂ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ಇಲ್ಲ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು, ಅಕ್ಟೋಬರ್,3,2025 (www.justkannada.in):  ಸಿಎಂ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ,  ಸಿಎಂ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ. ಯಾರೂ ಪಕ್ಷದ ಚೌಕಟ್ಟು ಮೀರಬಾರದು ಅಂತಾ ಸೂಚನೆ ಕೊಟ್ಟಿದ್ದರೂ ಕೆಲವರು ಅದನ್ನು ಮೀರಿ ಮಾತನಾಡಿದ್ದಾರೆ. ಈ ಬಗ್ಗೆ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರಿಗೆ ಸೂಚನೆ ನೀಡಿದ್ದೇನೆ ಎಂದರು.

ಮತಗಳ್ಳತನ ಕುರಿತು ಪ್ರತಿಕ್ರಿಯಿಸಿದ ರಣದೀಪ್ ಸಿಂಗ್ ಸುರ್ಜೇವಾಲ, ಮತಗಳ್ಳತನ ಮಹದೇವಪುರ ಮತ್ತು ಆಳಂದ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಬೇರೆ ಬೇರೆ ಕ್ಷೇತ್ರಗಳಲ್ಲೂ ನಡೆದಿದೆ. ಮಹಾರಾಷ್ಟ್ರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿ ಸಂವಿಧಾನ ನೀಡಿದ ಹಕ್ಕು ಕಿತ್ತುಕೊಳ್ತಿರುವ ಕಾರಣ ಕಾಂಗ್ರೆಸ್​ ‘ವೋಟ್ ಚೋರಿ’ ಅಭಿಯಾನ ನಡೆಸುತ್ತಿದೆ ಎಂದರು.

Key words: no discussion, about. changing CM, Randeep Singh Surjewala