ಜಾತಿ ಗಣತಿ ಸಮೀಕ್ಷೆ: ತಮ್ಮ ಕುಟುಂಬದ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಅಕ್ಟೋಬರ್,4,2025 (www.justkannada.in):  ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಯುತ್ತಿದ್ದು ಈ ನಡುವೆ ಇಂದು ಅಧಿಕಾರಿಗಳು ಡಿಸಿಎಂ ಡಿಕೆ ಶಿವಕುಮಾರ್ ಮನೆಯಿಂದಲೇ ಸಮೀಕ್ಷೆ ಆರಂಭಿಸಿ ಮಾಹಿತಿ ಪಡೆದುಕೊಂಡರು.

ಬೆಂಗಳೂರಿನ ಸದಾಶಿವನಗರದಲ್ಲಿನ ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಹಲವು ಪ್ರಶ್ನೆಗಳನ್ನ ಕೇಳಿ ಮಾಹಿತಿ ಪಡೆದುಕೊಂಡರು. ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಉತ್ತರ ನೀಡಿದ್ದಾರೆ.

ಧರ್ಮ ಜಾತಿ ಬಗ್ಗೆ ಕೇಳಿದ ಪ್ರಶ್ನೆಗೆ  ಧರ್ಮ ಹಿಂದೂ ಜಾತಿ ಒಕ್ಕಲಿಗ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿವರಣೇ ನೀಡಿದ್ದು, ಕುಟುಂಬದ ಮಾಹಿತಿ, ಶಿಕ್ಷಣ, ಆದಾಯ, ಕೆಲಸ ಕಾರ್ಯ  ಹೀಗೆ ಸಮೀಕ್ಷೆಯಲ್ಲಿನ ಎಲ್ಲಾ ಪ್ರಶ್ನೆಗಳಿಗೂ ಡಿಸಿಎಂ ಡಿಕೆ ಶಿವಕುಮಾರ್ ಉತ್ತರ ನೀಡಿದ್ದಾರೆ ಎನ್ನಲಾಗಿದೆ.

Key words: Caste census,  DCM, DK Shivakumar, home, survey