ಮಹೇಶ್ ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

ದಕ್ಷಿಣ ಕನ್ನಡ, ಅಕ್ಟೋಬರ್,4,2025 (www.justkannada.in):  ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ಶೋಧ ನಡೆಸುವ ವೇಳೆ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾಗಿದ್ದ ಪ್ರಕರಣ ಸಂಬಂಧ ಹೋರಾಟಗಾರ ಮಹೇಶ್ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನ ಕೋರ್ಟ್ ಕಾಯ್ದಿರಿಸಿದೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ಶೋಧ ನಡೆಸುವ ವೇಳೆ ಮಹೇಶ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ  ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಈ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಹೇಶ್ ತಿಮರೋಡಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಾದ ಪ್ರತಿವಾದ ಆಲಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸೇಷನ್ಸ್ ಕೋರ್ಟ್ ನ್ಯಾಯಾಧೀಶರು ಜಾಮೀನು ಅರ್ಜಿ ಆದೇಶವನ್ನ ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದ್ದಾರೆ.

ಇನ್ನು ಮಹೇಶ್ ತಿಮರೋಡಿ ವಿರುದ್ದ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಈ ನಡುವೆ ಮಹೇಶ್ ತಿಮರೋಡಿ ಅವರನ್ನ 1 ವರ್ಷಗಳ ಕಾಲ  ರಾಯಚೂರಿನ ಮಾನ್ವಿಗೆ ಗಡಿಪಾರು ಮಾಡಲಾಗಿತ್ತು. ಗಡಿಪಾರು ಆದೇಶ ಪ್ರಶ್ನಿಸಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಸದ್ಯಕ್ಕೆ ಗಡಿಪಾರು ಮಾಡದಂತೆ ಮಹೇಶ್ ತಿಮರೋಡಿ ವಿರುದ್ದ ಬಲವಂತ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಈಗಾಗಲೇ ಸೂಚಿಸಿದೆ.

Key words: Court, Reserved, Mahesh Timarodi, Bail Order