ಕೋಲ್ಡ್ರಿಪ್ ಸಿರಪ್ ಸೇವಿಸಿ ಮಕ್ಕಳ ಸರಣಿ ಸಾವು ಕೇಸ್: ನಮ್ಮ ರಾಜ್ಯದಲ್ಲಿ ಈ ಬಗ್ಗೆ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಅಕ್ಟೋಬರ್,6,2025 (www.justkannada.in):  ಕೋಲ್ಡ್ರಿಪ್  ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸರಣಿ ಸಾವು ಪ್ರಕರಣ ಸಂಬಂಧ ಮಧ್ಯಪ್ರದೇಶದಲ್ಲಿ ನಡೆದ ಘಟನೆ ಅತ್ಯಂತ ಆತಂಕಕಾರಿ ನಮ್ಮ ರಾಜ್ಯದಲ್ಲೂ ಈ ಬಗ್ಗೆ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಔಷಧ ಮಾದರಿ ಪರೀಕ್ಷೆಯಲ್ಲಿ ನಮ್ಮ ರಾಜ್ಯ ನಂಬರ್ ಒನ್ ಇದೆ. ಕೋಲ್ಡ್ರಿಫ್  ಕೆಮ್ಮಿನ ಸಿರಪ್ ನಮ್ಮ ರಾಜ್ಯದಲ್ಲಿ ಸರಬರಾಜು ಆಗಿಲ್ಲ. ಈ ಬಗ್ಗೆ ಒಂದು ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ ಎಂದರು.

ಈ ಹಿಂದೆ  ಆರೋಗ್ಯ ಸುರಕ್ಷತೆ ಬಗ್ಗೆ ಯಾರು ಗಮನಹರಿಸಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಸುರಕ್ಷತೆ ಬಗ್ಗೆ ಕಾಳಜಿ ವಹಿಸಿದ್ದೇವೆ.  ಜಾಗೃತಿ ಮೂಡಿಸುವ ಬಗ್ಗೆ ಕ್ರಮ ವಹಿಸಲಾಗಿದೆ. ಮಿನರಲ್ ವಾಟರ ತಯಾರಿಕೆ ಸಂಬಂಧ ಪರಿಶೀಲಿಸಿ ಕ್ರಮ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Key words: serial deaths, children, consuming, Coldrip syrup, Minister, Dinesh Gundu Rao