ಬೆಂಗಳೂರು,ಅಕ್ಟೋಬರ್,6,2025 (www.justkannada.in): ‘ದಿ ಬೆಂಗಳೂರು ಸಿಟಿ ಇನ್ಸ್ ಟಿಟ್ಯೂಟ್’ ಹೊಸ ತಂತ್ರಜ್ಞಾನ ಹಾಗೂ ಸೌಲಭ್ಯಗಳೊಂದಿಗೆ ಸಾರ್ವಜನಿಕರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ಒದಗಿಸಲಿ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಾ. ಸಿ. ಎನ್. ಮಂಜುನಾಥ್ ಶುಭ ಹಾರೈಸಿದರು.
ಸಂಸ್ಥೆಯ ನವೀಕರಿಸಿದ ಆಡಳಿತ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಡಾ. ಸಿ. ಎನ್. ಮಂಜುನಾಥ್, ಈ ನವೀಕರಣವು ಎಲ್ಲಾ ಸದಸ್ಯರಿಗೆ ಸೌಲಭ್ಯಗಳು ಮತ್ತು ಸೇವೆಗಳನ್ನು ಹೆಚ್ಚಿಸುವಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. City Institute ತನ್ನ ಪರಂಪರೆಯ ಮೌಲ್ಯಗಳನ್ನು ಉಳಿಸಿಕೊಂಡು, ಹೊಸ ತಂತ್ರಜ್ಞಾನ ಹಾಗೂ ಸೌಲಭ್ಯಗಳೊಂದಿಗೆ ಸಾರ್ವಜನಿಕರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ಒದಗಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರು ಬಸವನಗುಡಿಯ ಹೃದಯ ಭಾಗದಲ್ಲಿ ಅಸ್ಥಿತ್ವದಲ್ಲಿರುವ “The Bangalore City Institute (R)” ಹಲವು ದಶಕಗಳಿಂದ ಸಮಾಜಮುಖಿ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿದ್ದು, ಅನೇಕರ ಸೇವಾಭಾವನೆ ಹಾಗೂ ಸಮರ್ಪಣೆಯಿಂದ ಬೆಳೆದು ಬಂದಿದೆ.
ಈ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಸುಕುಮಾರ್ ಕುನಾ, ಗೌರವ ಕಾರ್ಯದರ್ಶಿ ಲಕ್ಷ್ಮಿಶ ಚಂದ್ರ, ಉಪಾಧ್ಯಕ್ಷ ಚಂದ್ರಶೇಖರ ಎಸ್.ಸಿ., ಖಜಾಂಚಿ ಸತೀಶ್ ಬಾಬು ಆರ್.ಎಸ್., ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
Key words: Bangalore City Institute, Public Service, MP, CN Manjunath