ಬೆಂಗಳೂರು,ಅಕ್ಟೋಬರ್,7,2025 (www.justkannada.in): 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕರಿ ಕಾಲೇಜುಗಳಲ್ಲಿನ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶಿಸಿದ್ದು ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ ಅವರು ಧನ್ಯವಾದ ಅರ್ಪಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಎಂಎಲ್ ಸಿ ವಿವೇಕಾನಂದ, ಅತಿಥಿ ಉಪನ್ಯಾಸಕರ ನೇಮಕ ವಿಳಂಬದಿಂದ ರಾಜ್ಯಾದ್ಯಂತ ಪದವಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬವಾಗಿರುವುದರಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ಎಲ್ಲಾ ಆರಂಭಿಕ ಸೆಮಿಸ್ಟರ್ ಗಳ ಪರೀಕ್ಷೆಯನ್ನು ವಿದ್ಯಾರ್ಥಿಗಳು ಪಾಠವಿಲ್ಲದೆ ಎದುರಿಸಬೇಕಾದ ಸಂದರ್ಭ ಒದಗಿಬಂದಿದೆ. ಈ ರೀತಿಯಾಗಿ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡದೆ, ಅವರ ಭವಿಷ್ಯವನ್ನು ಗಮದಲ್ಲಿಟ್ಟಿಕೊಂಡು ಆದಷ್ಟು ಬೇಗ ಹೊಸದಾಗಿ ಕೌನ್ಸಿಲಿಂಗ್ ನಡೆದು ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು. ಯುಜಿಸಿ, ಯುಜಿಸಿಯೇತರು ಎಂಬ ತಾರತಮ್ಯ ಮಾಡದೆ ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವವರನ್ನು ನೇಮಕಾತಿಯಲ್ಲಿ ಪ್ರಥಮ ಆದ್ಯತೆ ಮೇರೆಗೆ ಪರಿಗಣಿಸಿ ನ್ಯಾಯಾಲಯದಲ್ಲಿರುವ ವ್ಯಾಜ್ಯವನ್ನು ಶೀಘ್ರವಾಗಿ ಪರಿಹರಿಸಲು ಇಲಾಖೆಯು ಕಾರ್ಯೋನ್ಮುಕವಾಗಿ, ಈ ಗೊಂದಲಕ್ಕೆ ತೆರೆ ಎಳೆಯಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ, ಉನ್ನತ ಶಿಕ್ಷಣ ಸಚಿವರಿಗೆ, ಸಂಬಂಧಪಟ್ಟ ಅಧಿಕಾರಿವರ್ಗದವರಿಗೆ ಕೋರಿಕೊಳ್ಳಲಾಗಿತ್ತು.
ಅಲ್ಲದೆ ಸದರಿ ವಿಚಾರವಾಗಿ ಅತಿಥಿ ಉಪನ್ಯಾಸಕರುಗಳು, ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ಮಾಡುವುದರ ಮೂಲಕ ಸರ್ಕಾರದ ಗಮನ ಸೆಳೆದಿದ್ದರು ಅದರನ್ವಯ ದಿನಾಂಕ:-30/09/2025 ರಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿ 2025-26ನೇ ಸಾಲಿನ ಸೆಮೆಸ್ಟರ್ ಪೂರ್ಣಗೊಳ್ಳುವವರಿಗೆ 2024-25 ನೇ ಸಾಲಿನಲ್ಲಿ ಕರ್ತವ್ಯ ನಿರ್ವಸಿದ್ದ ಅತಿಥಿ ಉಪನ್ಯಾಸಕರನ್ನು ಮುಂದುವರೆಸಲು ಹಾಗೂ ಈ ರೀತಿ ಮುಂದುವರಿಕೆ ನಂತರವೂ ಕಾರ್ಯಭಾರವಿದ್ದಲ್ಲಿ ಅಂತಹ ಕಾರ್ಯಭಾರಕ್ಕೆ ಎದುರಾಗಿ ಮಾನ್ಯ ನ್ಯಾಯಾಲಯದ ಮಧ್ಯಂತರ ಆದೇಶದನುಸಾರ ಪ್ರಸ್ತುತ ಅರ್ಜಿ ಸಲ್ಲಿಸಿರುವ ಅತಿಥಿ ಉಪನ್ಯಾಸಕರನ್ನಾಗಿ ಆಯ್ಕೆ ಮಾಡಿಕೊಳ್ಳಲು ಸರ್ಕಾರದ ಈ ಸುತ್ತೋಲೆಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ. ನಮ್ಮಗಳ ಈ ಮನವಿಗೆ ಸಹಕರಿಸಿದೆ ಮುಖ್ಯಮಂತ್ರಿಗಳಿಗೆ, ಉನ್ನತ ಶಿಕ್ಷಣ ಸಚಿವರಿಗೆ ಸಂಬಂಧಪಟ್ಟ ಅಧಿಕಾರಿ ವರ್ಗದವರಿಗೆ ಶಿಕ್ಷಕರ ಪ್ರತಿನಿಧಿಯಾಗಿ ಧನ್ಯವಾದಗಳನ್ನ ತಿಳಿಸುತ್ತೇನೆ ಎಂದು ವಿವೇಕಾನಂದ ತಿಳಿಸಿದ್ದಾರೆ.
Key words: Appointment, Guest Lecturer, MLC, K. Vivekananda, thanked, Govt