ಉತ್ತರ ಕರ್ನಾಟಕದಲ್ಲಿ ಪ್ರವಾಹ: ಪ್ರಧಾನಿ ಮೋದಿಗೆ ಪತ್ರ ಬರೆದ ಶಾಸಕ ಯತ್ನಾಳ್

ವಿಜಯಪುರ, ಅಕ್ಟೋಬರ್,8,2025 (www.justkannada.in): ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ನೆರೆ ಅಧ್ಯಯನಕ್ಕೆ ಕೇಂದ್ರ ತಂಡ ಕಳುಹಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಶಾಸಕ ಯತ್ನಾಳ್, ಉತ್ತರ ಕರ್ನಾಟಕದಲ್ಲಿ ಭೀಮಾನದಿ ಪ್ರವಾಹದಿಂದ ಜನರಿಗೆ ಸಂಕಷ್ಟ ಎದುರಾಗಿದೆ.  ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಪ್ರವಾಹವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಾಜ್ಯ ಸರ್ಕಾರ ಈ ಬಗ್ಗೆ ಕಾಳಜಿ ವಹಿಸಿಲ್ಲ. ರಾಜ್ಯ ಸರ್ಕಾರ ಪ್ರವಾಹದ ಬಗ್ಗೆ  ಸೂಕ್ತ ಪರಿಹಾರ ಕ್ರಮ ಕೈಗೊಂಡಿಲ್ಲ.

ಹೀಗಾಗಿ  ಕೇಂದ್ರದಿಂ ತುರ್ತುಪರಿಹಾರ ನೀಡಬೇಕು.  ಪ್ರವಾಹ ಅಧ್ಯಯನಕ್ಕೆ ಕೇಂದ್ರ ತಂಡವನ್ನ ಕಳುಹಿಸಬೇಕು ಎಂದು ಪತ್ರದಲ್ಲಿ ಶಾಸಕ ಯತ್ನಾಳ್ ಮನವಿ ಮಾಡಿದ್ದಾರೆ.

Key words: Floods, North Karnataka, MLA Yatnal, letter, PM, Modi