ನಟ ಸುದೀಪ್ ಅವರನ್ನೇ ನೇರವಾಗಿ ಟಾರ್ಗೆಟ್ ಮಾಡಿದ್ದಾರೆ- ಛಲವಾದಿ ನಾರಾಯಣಸ್ವಾಮಿ ಆಕ್ರೋಶ

ಬೆಂಗಳೂರು,ಅಕ್ಟೋಬರ್, 8,2025 (www.justkannada.in):  ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ ಜಡಿದು ‘ಬಿಗ್ ಬಾಸ್ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಸರ್ಕಾರ ನಟ ಕಿಚ್ಚ ಸುದೀಪ್ ಅವರನ್ನು ನೇರವಾಗಿ ಟಾರ್ಗೆಟ್ ಮಾಡಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಛಲವಾದಿ ನಾರಾಯಣ ಸ್ವಾಮಿ ಅವರು, ಪೊಲ್ಯೂಷನ್ ಬೋರ್ಡ್ ಗೂ ಇದಕ್ಕೂ ಏನ್ ಸಂಬಂಧ? ದೊಡ್ಡ ದೊಡ್ಡ ಫ್ಯಾಕ್ಟರಿ ಮುಚ್ಚೋಕೆ ಆಗಿಲ್ಲ ಇವರಿಗೆ. ಕೆಎನ್ ರಾಜಣ್ಣ, ನಾಗೇಂದ್ರ ಬಳಿಕ ಸುದೀಪ್  ಅವರನ್ನ ಟಾರ್ಗೆಟ್ ಮಾಢಿದ್ದಾರೆ. ಜನಾಂಗೀಯವಾಗಿ ಟಾರ್ಗೆಟ್ ಮಾಡಿದ್ದಾರೆ ಎಂದು ಆರೋಪಿಸಿದರು.

ಇದೇನು ಕೈಗಾರಿಕೆಯಾ? ಇಲ್ಲೇನು ಅನಾರೋಗ್ಯ ತರುವಂಥ ಹೊಗೆ ಬರ್ತಿದೆಯಾ? ಮಾಲಿನ್ಯಕಾರಕ ದೊಡ್ಡ ದೊಡ್ಡ ಕೈಗಾರಿಕೆಗಳನ್ನು ಮುಚ್ಚೋಕೆ ಇವರಿಗೆ ಆಗಿಲ್ಲ. ಅಂತಹ ಫ್ಯಾಕ್ಟರಿಗಳನ್ನು ಬಿಟ್ಟು ಇಲ್ಲಿಗೆ ಬಂದು ಬೀಗ ಹಾಕಿಸಿದ್ದಾರೆ ಎಂದು ಕಿಡಿಕಾರಿದರು.

Key words: Actor, Sudeep , directly ,targeted, Chalavadi Narayanaswamy