ಕೋಲಾರ, ಅಕ್ಟೋಬರ್,8,2025 (www.justkannada.in): ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಸಮೀಕ್ಷೆಯ ಮಾಹಿತಿ ಆಧರಿಸಿ ಸರ್ಕಾರ ನಿರ್ಧಾರ ಮಾಡುತ್ತದೆ. ರಾಜ್ಯದ ಅಭಿವೃದ್ದಿಗೆ ಪೂರಕ ತೀರ್ಮಾನ ಕೈಗೊಳ್ಳಲಿದೆ. ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ ಎಂದರು.
ಇನ್ನು ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಬಗ್ಗೆ ಗಮನಹರಿಸುತ್ತಿದ್ದೇವೆ. ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಸಿಎಂ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
ಬಿಹಾರ ಚುನಾವಣೆ ನಂತರ ರಾಜ್ಯದಲ್ಲಿ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆಎಚ್ ಮುನಿಯಪ್ಪ, ಬಿಹಾರ ವಿಧಾನಸಭೆಗೆ ಇನ್ನೂ ಚುನಾವಣೆಯೇ ನಡೆದಿಲ್ಲ. ಅದರ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಬಿಹಾರದ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Key words: caste census, survey, Minister, Muniyappa