ಎರಡು ದಿನದಿಂದ ಬಂದ್ ಆಗಿದ್ದ ‘ಬಿಗ್‌ ಬಾಸ್‌’ಮನೆ ರೀ ಓಪನ್‌

ರಾಮನಗರ,ಅಕ್ಟೋಬರ್,9,2025 (www.justkannada.in): ಪರಿಸರ ನಿಯಮ ಉಲ್ಲಂಘನೆ ಆರೋಪದ ಮೇಲೆ ನೋಟಿಸ್ ನೀಡಿದರೂ ಕ್ಯಾರೆ ಎನ್ನದ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದ ಹಿನ್ನೆಲೆಯಲ್ಲಿ ಕಳೆದ ಎರಡು ದಿನದಿಂದ ಬಂದ್ ಆಗಿದ್ದ ಬಿಗ್ ಬಾಸ್ ಹೌಸ್ ಇದೀಗ ರೀ ಓಪನ್ ಆಗಿದೆ.

ಡಿಸಿಎಂ ಡಿಕೆ ಶಿವಕುಮಾರ್‌ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ 2.45ರ ವೇಳೆಗೆ ಬಿಡದಿ ಬಳಿ ಇರುವ ಬಿಗ್‌ಬಾಸ್‌ ಮನೆಯನ್ನು ತೆರೆಯಲಾಗಿದ್ದು ಸ್ಪರ್ಧಿಗಳನ್ನು ಶಿಫ್ಟ್‌ ಮಾಡಲಾಗಿದೆ.

ನಸುಕಿನ ಜಾವ 2:45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್‌ಪಿ ಶ್ರೀನಿವಾಸ್ ಗೌಡ, ತಹಶಿಲ್ದಾರ್ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಜಾಲಿವುಡ್‌ ಸ್ಟುಡಿಯೋದ ಗೇಟ್‌ ಸೀಲ್‌ ಓಪನ್‌ ಮಾಡಿದ್ದಾರೆ.

ಬಿಗ್ ಬಾಸ್ ಕನ್ನಡ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್ ಆವರಣದ ಸೀಲ್ ಅನ್ನು ತೆಗೆದುಹಾಕಲು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗೆ ನಾನು ನಿರ್ದೇಶನ ನೀಡಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದರು.

Key words: ‘Bigg Boss, house, reopened