ಬೆಂಗಳೂರು,ಅಕ್ಟೋಬರ್,9,2025 (www.justkannada.in): ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡುವೆಯೇ ಸಿಎಂ ಸಿದ್ದರಾಮಯ್ಯ ಅಕ್ಟೋಬರ 13 ರಂದು ತಮ್ಮ ಸಂಪುಟ ಸಹದ್ಯೋಗಿಗಳಿಗೆ ಔತಣಕೂಟ ಏರ್ಪಡಿಸಿದ್ದಾರೆ ಎನ್ನಲಾಗಿದೆ.
ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, 15 ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸ ತಂಡ ರಚನೆ ಮಾಡುವ ಸಾಧ್ಯತೆ ಇದೆ ಎಂದು ಸುದ್ದಿಯಾಗುತ್ತಿದೆ
ಈ ಮಧ್ಯೆಯೇ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಗೂ ಮುನ್ನ ಸಂಪುಟದ ಸಹೋದ್ಯೋಗಿಗಳಿಗಾಗಿ ಅಕ್ಟೋಬರ್ 13ರಂದು ಔತಣಕೂಟ ಏರ್ಪಾಟು ಮಾಡಿದ್ದಾರೆ. ಈಗಾಗಲೇ ಎಲ್ಲರಿಗೂ ಮುಖ್ಯಮಂತ್ರಿಗಳ ಸಚಿವಾಲಯದಿಂದಲೇ ಸಂದೇಶ ರವಾನಿಸಲಾಗಿದೆ.
Key words: CM Siddaramaiah, cabinet, Ministers, dinner, October 13th.