ಕೋರ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಪೋಕ್ಸೋ ಕೇಸ್ ಆರೋಪಿ

ಬೆಂಗಳೂರು ,ಅಕ್ಟೋಬರ್ 9,2025 (www.justkannada.in):  ನ್ಯಾಯಾಲಯದ ಕಟ್ಟಡದಿಂದ ಜಿಗಿದು ಪೋಕ್ಸೋ ಪ್ರಕರಣದ  ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿಟಿ ಸಿವಿಲ್ ಕೋರ್ಟ್ ನ 5 ನೇ ಮಹಡಿಯಿಂದ ಜಿಗಿದು ಗೌತಮ್ ಎಂಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಚಾರಣೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಆರೋಪಿಯನ್ನು ಕೋರ್ಟ್ ಗೆ ಕರೆತರಲಾಗಿತ್ತು.

ಆರೋಪಿ ಗೌತಮ್ ಸಿಟಿ ಸಿವಿಲ್ ಕೋರ್ಟ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ಮಿಸಿದ್ದನು, ಕೂಡಲೇ ಆತನನ್ನು ಪೊಲೀಸರು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದರು.  ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Key words: POCSO case, accused, commits, suicide