ಬೆಂಗಳೂರು,ಅಕ್ಟೊಬರ್,9,2025 (www.justkannada.in): ರಾಜ್ಯದ ಪಡಿತರ ಚೀಟಿದಾರರಿಗೆ ವಿತರಿಸಲಾಗುತ್ತಿರುವ 10 ಕೆಜಿ ಅಕ್ಕಿಯಲ್ಲಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಆಹಾರ ಸಚಿವ ಎಚ್ ಕೆ ಮುನಿಯಪ್ಪ, ಪಡಿತರ ಚೀಟಿದಾರರಿಗೆ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ನಿರ್ಧರಿಸಲಾಗಿದೆ. ಆಹಾರದ ಕಿಟ್ ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಅಡುಗೆ ಎಣ್ಣೆ, ಗೋಧಿ ಇರಲಿದೆ ಎಂದರು.
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಹಾಗೂ ದುರುಪಯೋಗ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 2023ರಲ್ಲಿ 10 ಕೆಜಿ ಅಕ್ಕಿ ನೀಡಲು ಮುಂದಾಗಿದ್ದವು ಆದರೆ ಕೇಂದ್ರ ಸರ್ಕಾರ ಆಗ ಅಕ್ಕಿ ನೀಡಲಿಲ್ಲ ಎಂದರು.
Key words: government, decision , ‘food kit, rice