Friday, September 11, 2026

BDA Apartments

Home Front Page ಮಳೆಯಿಂದಾಗಿ ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್ ಬೆಳೆಹಾನಿ-ಕೃಷಿ ಸಚಿವ ಚಲುವರಾಯಸ್ವಾಮಿ

ಮಳೆಯಿಂದಾಗಿ ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್ ಬೆಳೆಹಾನಿ-ಕೃಷಿ ಸಚಿವ ಚಲುವರಾಯಸ್ವಾಮಿ

ಮಂಡ್ಯ,ಅಕ್ಟೋಬರ್,11,2025 (www.justkannada.in):  ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.

ಇಂದು ಮಂಡ್ಯ ಜಿಲ್ಲೆಯಲ್ಲಿ ಮಳೆಹಾನಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ,  ನಿನ್ನೆ ಮೊನ್ನೆಯಿಂದ ಮಂಡ್ಯದಲ್ಲೂ ಸಾಕಷ್ಟು ಮಳೆಯಾಗಿದೆ. ಶ್ರೀರಂಗಪಟ್ಟಣದ ದರಸಗುಪ್ಪೆ ಬಳಿ ಸಿಡಿಎಸ್ ನಾಲೆ ಒಡೆದಿದೆ. ರವಿ ಶಾಸಕರಾದ ಬಳಿಕ ತಡೆಗೋಡೆ ನಿರ್ಮಾಣ ಮಾಡಿಸಿದ್ದರು.  ತಡೆಗೋಡೆ ನಿರ್ಮಾಣದಿಂದ ಹೆಚ್ಚಿನ ತೊಂದರೆ ಆಗುತ್ತಿಲ್ಲ  ರಸ್ತೆ, ಒಳಚರಂಡಿ ಕಾಮಗಾರಿ ಶೀಘ್ರ ಆರಂಭಿಸುತ್ತೇವೆ ಎಂದರು.

ಮೊನ್ನೆಯವರೆ ಮಂಡ್ಯ ಜಿಲ್ಲೆಯಲ್ಲಿ  80 ಹೆಕ್ಟೆರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್  ಬೆಳೆ ಹಾನಿಯಾಗಿದ್ದು ಕೂಡಲೇ ಬೆಳೆಹಾನಿ ಬಗ್ಗೆ ಸರ್ವೇ ಮಾಡಿಸಿ ಪರಿಹಾರ ನೀಡುತ್ತೇವೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

Key words: 12 lakh, hectares , crops, damaged, state, Minister, Cheluvarayaswamy