Saturday, September 12, 2026

BDA Apartments

ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್ BD...
Home Front Page ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್

ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಅಕ್ಟೋಬರ್,11,2025 (www.justkannada.in): ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ಹೇಳಲ್ಲ ಎಂದು  ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನನಗೆ ನನ್ನ ಗುರಿ ಗೊತ್ತಿದೆ ನನಗೆ ಯಾವ ಆತುರವೂ ಇಲ್ಲ. ಈ ರೀತಿ ಹೇಳುವ ಅವಶ್ಯಕತೆಯೂ ಇಲ್ಲ. ಜನರು ಭೇಟಿಗೆ ಬಂದಾಗ ಕೆಲವರು ಸಿಎಂ ಆಗಬೇಕು ಅಂತಾರೆ. ನನಗೆ  ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ.

ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ. ಭಗವಂತ ನನಗೆ ಯಾವಾಗ  ಅವಕಾಶ ಕೊಡುತ್ತಾನೋ ಕೊಡಲಿ ರಾಜ್ಯದ ಜನರ ಸೇವೆಗೆ ಉತ್ತಮ ಆಡಳಿತ ನೀಡಲು ಪ್ರಯತ್ನಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Key words: I am, not, hurry, CM post, DCM, DK Shivakumar