ನವದೆಹಲಿ,ಅಕ್ಟೋಬರ್11,2025 (www.justkannada,in): ಜಮ್ಮು&ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ 4 ವಾರಗಳ ಗಡುವು ನೀಡಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಶೀಘ್ರದಲ್ಲಿ ರಾಜ್ಯದ ಸ್ಥಾನಮಾನ ನೀಡಲು ಸೂಚಿಸುವಂತೆ ಕೋರಿ ಶಿಕ್ಷಣ ತಜ್ಞ ಝಹೂರ್ ಅಹಮದ್ ಭಟ್ ಮತ್ತು ಸಾಮಾಜಿಕ ಕಾರ್ಯಕರ್ತ ಅಹಮದ್ ಮಲ್ಲಿಕ್ ಸಲ್ಲಿಸಿದ್ದ ಅರ್ಜಿಗಳು ಸೇರಿದಂತೆ ಈ ಕುರಿತಾದ ಹಲವು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠವು ವಿಚಾರಣೆ ನಡೆಸುತ್ತಿದೆ.
ಈ ಮಧ್ಯೆ ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಕುರಿತು 4 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
‘ಇದೊಂದು ವಿಭಿನ್ನ ಸಮಸ್ಯೆ ಹಾಗಾಗಿ ಸಮಗ್ರ ಅವಲೋಕನದ ಅತ್ಯಗತ್ಯವಾಗಿದೆ. ಈ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ’ ಎಂದು ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ಅವರು ನ್ಯಾಯಾಲಯಕ್ಕೆ ತಿಳಿಸಿದರು.
Key words: Jammu & Kashmir, Supreme Court, 4 weeks, respond, Central hovrnment