Sunday, September 6, 2026

BDA Apartments

Home Front Page 2ನೇ ಟೆಸ್ಟ್: ವೆಸ್ಟ್ ಇಂಡೀಸ್ ವಿರುದ್ದ ಟೀಮ್ ಇಂಡಿಯಾಗೆ ಭರ್ಜರಿ ಜಯ

2ನೇ ಟೆಸ್ಟ್: ವೆಸ್ಟ್ ಇಂಡೀಸ್ ವಿರುದ್ದ ಟೀಮ್ ಇಂಡಿಯಾಗೆ ಭರ್ಜರಿ ಜಯ

ನವದೆಹಲಿ,ಅಕ್ಟೋಬರ್,14,2025 (www.justkannada.in): ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ​ಗಳ ಭರ್ಜರಿ ಜಯ ಸಾಧಿಸಿಸುವ ಮೂಲಕ ಸರಣಿ ಕ್ಲೀನ್ ಸ್ವೀಪ್ ಮಾಡಿದೆ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (175) ಹಾಗೂ ಶುಭ್​ಮನ್ ಗಿಲ್ (129) ಶತಕ ಸಿಡಿಸಿದರು. ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ನಷ್ಟಕ್ಕೆ 518 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು. ನಂತರ ಬ್ಯಾಟಿಂಗ್ ಇಳಿದ ವೆಸ್ಟ್ ಇಂಡೀಸ್  ಕೇವಲ 248 ರನ್​ಗಳಿಗೆ ಆಲೌಟ್ ಆಯಿತು.

ಅತ್ತ 270 ರನ್​ಗಳ ಮುನ್ನಡೆ ಪಡೆದ ಟೀಮ್ ಇಂಡಿಯಾ ಫಾಲೋ ಆನ್ ಹೇರಿತು. ಅದರಂತೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ಪರ ಜಾನ್​ ಕ್ಯಾಂಪ್​ಬೆಲ್ (115) ಹಾಗೂ ಶೈ ಹೋಪ್ (103) ಶತಕ ಸಿಡಿಸಿ ಈ ಮೂಲಕ ವೆಸ್ಟ್ ಇಂಡೀಸ್ ತಂಡ ದ್ವಿತೀಯ ಇನಿಂಗ್ಸ್​ನಲ್ಲಿ 390 ರನ್​ಗಳಿಸಿತು.

ಮೊದಲ ಇನಿಂಗ್ಸ್​ನಲ್ಲಿ 270 ರನ್​ಗಳ ಮುನ್ನಡೆ ಪಡೆದಿದ್ದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 121 ರನ್​ಗಳ ಗುರಿ ಪಡೆದ ಟೀಂ ಇಂಡಿಯಾ  3 ವಿಕೆಟ್ ಕಳೆದುಕೊಂಡು 124 ರನ್​ಗಳ ಗುರಿ ತಲುಪಿಸುವ ಮೂಲಕ ಜಯ ಸಾಧಿಸಿತು.

Key words: Team India,  2nd Test, against, West Indies, won