ರಸ್ತೆ ಗುಂಡಿಗಳ ಬಗ್ಗೆ ಮತ್ತೆ ಉದ್ಯಮಿ ಕಿರಣ್ ಮಜುಂದಾರ್ ಷಾ ಅಸಮಾಧಾನ.

ಬೆಂಗಳೂರು, ಅಕ್ಟೋಬರ್, 14,2025 (www.justkannada.in): ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ಬಯೋಕಾನ್ ಮುಖ್ಯಸ್ಥೆ, ಮಹಿಳಾ ಉದ್ಯಮಿ ಕಿರಣ್ ಮಜುಂದಾರ್ ಷಾ ಅವರು ಟ್ವೀಟ್ ಮಾಡಿ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಉದ್ಯಮಿ ಕಿರಣ್ ಮಜುಂದಾರ್ ಷಾ ಅವರು, ರಸ್ತೆಗಳನ್ನು ಏಕೆ ಸರಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಬಯೋಕಾನ್ ಪಾರ್ಕ್‌ಗೆ ಭೇಟಿ ನೀಡಿದ ವಿದೇಶಿ ಉದ್ಯಮಿಯೊಬ್ಬರು ನನ್ನನ್ನು ಪ್ರಶ್ನಿಸಿದರು. ಬೆಂಗಳೂರಿನ ರಸ್ತೆಗಳು ಏಕೆ ಇಷ್ಟೊಂದು ಕೆಟ್ಟದಾಗಿವೆ ಮತ್ತು ಸುತ್ತಲೂ ಇಷ್ಟೊಂದು ಕಸ ಏಕೆ ಇದೆ? ಸರ್ಕಾರ ಹೂಡಿಕೆಯನ್ನು ಬೆಂಬಲಿಸಲು ಬಯಸುವುದಿಲ್ಲವೇ? ಎಂದು ಪ್ರಶ್ನಿಸಿದರು. ನಾನು ಈಗಷ್ಟೇ ಚೀನಾದಿಂದ ಬಂದಿದ್ದೇನೆ ಆದರೆ ನನಗೊಂದು ವಿಚಾರ ಅರ್ಥವಾಗುತ್ತಿಲ್ಲ ಏಕೆ ಎಲ್ಲವೂ ಅನುಕೂಲಕರವಾಗಿದ್ದಾಗಲೂ ಏಕೆ ಭಾರತದಲ್ಲಿ ಈ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳುವುದಕ್ಕೆ ಆಗುತ್ತಿಲ್ಲ ಎಂದು ಕಿರಣ್ ಮಜುಂದಾರ್ ಷಾ ಅವರು ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Key words: Businessman, Kiran Mazumdar Shah , unhappy, about, potholes