ಮೈಸೂರು, ಅಕ್ಟೋಬರ್,14,2025 (www.justkannada.in): ಮೈಸೂರಿನಲ್ಲಿ ಅಕ್ಟೋಬರ್ 17 ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ನಾಡಿನ ಯುವಜನತೆಯ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ ಈಗಾಗಲೇ ಯುವನಿಧಿ, ಯುವನಿಧಿ ಪ್ಲಸ್ ಯೋಜನೆಗಳನ್ನು ಜಾರಿಗೊಳಿಸಿರುವ ಸರ್ಕಾರ ಅವರ ಕೌಶಲ್ಯಾಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ಇದರ ಜೊತೆಗೆ ಯುವಜನತೆಗೆ ಉದ್ಯೋಗ ದೊರೆಯಬೇಕು ಎಂಬ ನಿಟ್ಟಿನಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸುತ್ತಿದೆ.
ಇದೇ ತಿಂಗಳ 17ನೇ ತಾರೀಖಿನಂದು ಮೈಸೂರಿನ ಮಹಾರಾಜ ಕಾಲೇಜ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದು.
ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ https://udyogamela.ksdckarnataka.com ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
Key words: Job fair, Mysore, October 17







