ನವದೆಹಲಿ,ಅಕ್ಟೋಬರ್,14,2025 (www.justkannada.in): ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ಮಾಡಿ ಫಲತಾಂಶವನ್ನ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್ ರಾಜ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ನಂಜೇಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ಶಾಸಕರಾಗಿ ಆಯ್ಕೆ ಅಸಿಂಧುಗೊಳಿಸಿದ್ದ ಆದೇಶಕ್ಕೆ ತಡೆ ನೀಡಿದ್ದು, ಮಾಲೂರು ಕ್ಷೇತ್ರದ ಮತಗಳ ಮರು ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮರುಮತ ಎಣಿಕೆ ಮಾಡಿ ಫಲಿತಾಂಶ ಘೋಷಿಸಬೇಡಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿ ವಿಚಾರಣೆಯನ್ನ ನಾಲ್ಕು ವಾರಗಳ ಕಾಲ ಮುಂದೂಡಿಕೆ ಮಾಡಿದೆ.
Key words: Supreme Court, orders, recount, votes, Malur assembly, constituency