ಬೆಂಗಳೂರು,ಅಕ್ಟೋಬರ್,14,2025 (www.justkannada.in): ಬೆಂಗಳೂರಿನ ರಸ್ತೆಗಳ ಬಗ್ಗೆ ಟ್ವಿಟ್ ಮಾಡಿದ ಉದ್ಯಮಿ ಕಿರಣ್ ಮಜುಂದಾರ್ ಅವರ ವಿರುದ್ದ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಬೆಂಗಳೂರಿಗೆ ಕಿರಣ್ ಮಜುಂದಾರ್ ಶಾ ಅವರ ಕೊಡುಗೆ ಇದೆ . ಕಿರಣ್ ಮಜುಂದಾರ್ ಬೆಂಗಳೂರಿಗೆ ಸಾಕಷ್ಟು ಬಯೋ ಟೆಕ್ನಾಲಜಿ ಕಾಣಿಕೆ ಕೊಟ್ಟಿದ್ದಾರೆ. ಬೆಂಗಳೂರು ಕೂಡ ಅವರಿಗೆ ಎಲ್ಲವನ್ನೂ ಕೊಟ್ಟಿದೆ. ಮಳೆ ಹಾನಿಗೆ ಇಡೀ ರಾಜ್ಯದಲ್ಲಿ ನ್ಯಾಷನಲ್ ಹೈವೇ, ಸ್ಟೇಟ್ ಹೈವೇ, ಅಂಗನವಾಡಿಗಳಿಗೆ ಅನಾಹುತ ಆಗಿವೆ. ಆದಷ್ಟು ಬೇಗ ರಸ್ತೆ ಗುಂಡಿಗಳನ್ನ ಮುಚ್ಚುತ್ತೇವೆ ಎಂದರು.
ನಾನು ಕೂಡ ಸಿಎಂ ಗೆ ಮನವಿ ಮಾಡಿದ್ದೇನೆ. ಮೂಲಭೂತ ಸೌಕರ್ಯಗಳ ಹಾನಿಯ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. 1000 ಕೋಟಿ ರೂಪಾಯಿಯಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುತ್ತಿದ್ದೇವೆ. ಸ್ವಲ್ಪ ಸಮಯ ಬೇಕು. ಬೆಂಗಳೂರಿಗೆ ಬೇರೆ ಕಡೆಗಳಿಂದ ಸಾಕಷ್ಟು ಮಂದಿ ಬಂದು ನೆಲೆಸಿದ್ದಾರೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಈಗ ಮಜುಂದಾರ್ ಈ ಮಾತು ಆಡುವ ಅವಶ್ಯಕತೆ ಇರಲಿಲ್ಲ ಎಂದು ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
Key words: Businessman, Kiran Majumdar’, post, potholes, Minister, M.B. Patil