ಬೆಂಗಳೂರು,ಅಕ್ಟೋಬರ್,14,2025 (www.justkannada.in): ಗದಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಆರ್.ಪಾಟೀಲ aವರನ್ನು ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಗೆ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಡಿ.ಆರ್.ಪಾಟೀಲ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನ ಮತ್ತು ಸೌಲಭ್ಯಗಳನ್ನು ನೀಡಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 310-ಬಿ ಉಪ-ಪ್ರಕರಣ (2)ರಡಿ ಸಾಮಾಜಿಕ ಆರ್ಥಿಕ ಅಭಿವೃದ್ಧಿಯ ಕ್ಷೇತ್ರದಲ್ಲಿ ತಜ್ಞರಾದ ಒಬ್ಬರು ಸರ್ಕಾರಿ ಸದಸ್ಯರನ್ನು ಡಿ.ಆರ್.ಪಾಟೀಲ್ ಅವರನ್ನು ನೇಮಕ ಮಾಡಿ, ಸರ್ಕಾರ ಅಧಿಸೂಚನೆ ಹೊರಡಿಸಿತ್ತು.
Key words: Former MLA, D.R. Patil, status of Minister of State.