ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ- ಶಾಸಕ ಹೆಚ್.ಸಿ ಬಾಲಕೃಷ್ಣ

ಬೆಂಗಳೂರು,ಅಕ್ಟೋಬರ್,15,2025 (www.justkannada.in):  ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಿಎಂ, ಡಿಸಿಎಂ ಮತ್ತು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಹೆಚ್.ಸಿ ಬಾಲಕೃಷ್ಣ, ನನ್ನ ಹಿರಿತನ ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ. ನೋಡೋಣ. ರಾಜ್ಯದಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ ಕ್ರಾಂತಿ ಆಗುತ್ತೆ ಎಂದು ಯಾರು ಹೇಳಿದ್ರು. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದರು.

ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಒಂದು ಅವಕಾಶ ನೀಡುವ ವಿಶ್ವಾಸವಿದೆ. ಪಕ್ಷವನ್ನ ಅಧಿಕಾರಕ್ಕೆ ತರಲು ಡಿಕೆ ಶಿವಕುಮಾರ್ ಶ್ರಮ ವಹಿಸಿದ್ದಾರೆ.  ಡಿಕೆಶ ಶಿವಕುಮಾರ್ ಗೆ ಒಂದು ಅವಕಾಶ ನೀಡುವ ವಿಶ್ವಾಸವಿದೆ ಎಂದು ಹೆಚ್.ಸಿ ಬಾಲಕೃಷ್ಣ ತಿಳಿಸಿದರು.

Key words: I am, also, aspirant, ministerial post, MLA, H.C. Balakrishna