ಮೈಸೂರು,ಅಕ್ಟೋಬರ್,16,2025 (www.justkannada.in): ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಬಂದಿದೆ ಎಂಬುದು ಶುದ್ಧ ಸುಳ್ಳು ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಕಿಡಿಕಾರಿದರು.
ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಹೆಚ್.ವಿಶ್ವನಾಥ್, ಆರ್‌ಎಸ್‌ಎಸ್ ನಿಂದ ರಾಜ್ಯದಲ್ಲಿ ಯಾವ ಅನಾಹುತ ಆಗಿದೆ ಹೇಳಿ? ಹಾಗಾದರೆ ಯೂತ್ ಕಾಂಗ್ರೆಸ್ ಏನು? ಅಲ್ಲಿ ಏನೇನು ನಡೆಯುತ್ತಿದೆ? ನಿಮ್ಮಪ್ಪನಂತೆ ಒಳ್ಳೆಯ ಕೆಲಸ ಮಾಡು ಎಂದು ಜನ ನಿನ್ನನ್ನು ಗೆಲ್ಲಿಸಿದ್ದಾರೆ. ಆದರೆ ನೀನು ಕೆಲಸಕ್ಕೆ ಬಾರದ ವಿಚಾರ ಮಾತನಾಡಿಕೊಂಡು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಳ್ಳಲು ಹೊರಟಿದ್ದೀಯ ಎಂದು ಗುಡುಗಿದರು.
ಮಲ್ಲಿಕಾರ್ಜುನ ಖರ್ಗೆ ಮಗನಿಗೆ ಯಾರು ಬೆದರಿಕೆ ಹಾಕುತ್ತಾರೆ. ಇದು ಬರೀ ಸುಳ್ಳಿನಿಂದ ಕೂಡಿದೆ. ನಾನು ಸಹ ಸಿದ್ದರಾಮಯ್ಯ ವಿರುದ್ಧ ಎಷ್ಟೊಂದು ಟೀಕೆಗಳನ್ನು ಮಾಡಿದ್ದೇನೆ. ಆದರೆ ಇದುವರೆಗೂ ಯಾರೊಬ್ಬರೂ ನನಗೆ ಕರೆ ಮಾಡಿ ಬೆದರಿಕೆ ಹಾಕಿಲ್ಲ, ಪ್ರಶ್ನೆ ಮಾಡಿಲ್ಲ. ಆದರೆ ಪ್ರಿಯಾಂಕ್ ಖರ್ಗೆ ಬೆದರಿಕೆ ಕರೆ ಬಂದಿದೆ ಎಂದು ಹೇಳಿರುವುದು ಶುದ್ಧ ಸುಳ್ಳು ಎಂದು ವಾಗ್ದಾಳಿ ನಡೆಸಿದರು.
Key words: Threatening call, Priyank Kharge, complete, lie, H. Vishwanath