ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ : ಕಣ್ತುಂಬಿಕೊಂಡ ಸಾವಿರಾರು ಭಕ್ತರು

ಕೊಡಗು,ಅಕ್ಟೋಬರ್,17,2025 (www.justkannada.in):  ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಐತಿಹಾಸಿಕ ತಲಕಾವೇರಿಯ ಕಾವೇರಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದು, ಸಾವಿರಾರು ಜನರು  ತೀರ್ಥೋದ್ಭವ ನೋಡಿ ಕಣ್ತುಂಬಿಕೊಂಡರು.

ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪಥ ಬದಲಾಯಿಸಿದ್ದು, ಈ ವೇಳೆ ಮಕರ ಲಗ್ನದಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಉದ್ಭವಿಸಿದ್ದು, ನೆರೆದಿದ್ದ ಸಾವಿರಾರು ಭಕ್ತರು ದರ್ಶನ ಪಡೆದು ಪುನೀತರಾದರು.

ತೀರ್ಥೋತ್ಸವ ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣರಾಜ ದತ್ತ ಒಡೆಯರ್ ಅವರು ಸಹ ಭಾಗವಹಿಸಿದ್ದರು.

Key words: Holy, Kaveri, thirthobdava, Talakaveri