ಜಾತಿ ಗಣತಿ ಸಮೀಕ್ಷೆ: ಅವಧಿ, ಅ.31ರವರೆಗೆ ವಿಸ್ತರಣೆ

ಬೆಂಗಳೂರು, ಅಕ್ಟೋಬರ್,20,2025 (www.justkannada.in):  ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿವಾರು ಸಮೀಕ್ಷೆ) ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದಸರಾ ರಜೆ ಕಳೆದು ಶಾಲೆಗಳು ಆರಂಭವಾಗಿರುವ ಕಾರಣ ಮುಂದಿನ ಒಂಬತ್ತು ದಿನ ನಡೆಯಲಿರುವ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರನ್ನು ಬಳಕೆ ಮಾಡಿಕೊಳ್ಳದಿರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸಮೀಕ್ಷಕರಿಗೆ 3 ದಿನ ರಜೆ

ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಗೆ ದೀಪಾವಳಿ ಹಬ್ಬದ ಕಾರಣ ಇದೇ  ಅಕ್ಟೊಬರ್ 20, 21 ಮತ್ತು 22ರಂದು ರಜೆ ನೀಡಲಾಗಿದೆ. ಅಕ್ಟೊಬರ್ 23ರಿಂದ ಮತ್ತೆ ಸಮೀಕ್ಷೆ ಆರಂಭವಾಗಲಿದ್ದು, ಆಯಾ ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಿದ್ದಾರೆ’ ಎಂದು  ಸಚಿವ ಶಿವರಾಜ್ ತಂಗಡಗಿ ಮಾಹಿತಿ ನೀಡಿದರು.

Key words: Caste Census, Survey, extended, till, October 31