ಯಾದಗಿರಿ,ಅಕ್ಟೋಬರ್,20,2025 (www.justkannada.in): ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ದ ಎಫ್ ಐಆರ್ ದಾಖಲಾಗಿದೆ.
ಯಾದಗಿರಿ ಜಿಲ್ಲೆಯ ಸುರಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ದ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಗಲಕೋಟೆ, ಬೆಳಗಾವಿ ಸೇರಿ ಹಲವೆಡೆ ರಮೇಶ್ ಕತ್ತಿ ವಿರುದ್ದ ಪ್ರಕರಣಗಳು ದಾಖಲಾಗಿದೆ.
ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪವಿದೆ. ಆದರ ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿರುವ ರಮೇಶ್ ಕತ್ತಿ, ನನ್ನ ಹೇಳಿಕೆಯನ್ನ ತಿರುಚಲಾಗಿದೆ. ಡಾಲ್ಬಿ ಹಚ್ಚಲು ಅಭಿಮಾನಿಗಳು ಒತ್ತಾಯಿಸಿದಾಗ ನಾನು ಬ್ಯಾಡರೋ (ಬೇಡ) ಎಂದಿದ್ದೆ. ನನ್ನ ಹೇಳಿಕೆಯನ್ನ ನನ್ನ ಗೆಲುವು ಸಹಿಸಲಾಗದ ವಿರೋಧಿಗಳಿಂದ ತಿರುಚಲಾಗಿದೆ. ಇದರಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದರು.
Key words: FIR, against, Ramesh Katti , Valmiki community