ಬೆಂಗಳೂರು, ಅಕ್ಟೋಬರ್,21,2025 (www.justkannada.in): ಬೆಂಗಳೂರಿನ ರಸ್ತೆ ಗುಂಡಿಗಳು, ಕಸದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಟುವಾಗಿ ಟೀಕಿಸಿ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದ ಉದ್ಯಮಿ ಕಿರಣ್ ಮಜುಂದಾರ್ ಷಾ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.
ಸಿಎಂ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಅವರ ನಿವಾಸದಲ್ಲಿ ಉದ್ಯಮಿ ಕಿರಣ್ ಮಜುಂದಾರ್ ಷಾ ಭೇಟಿಯಾಗಿ ದೀಪಾವಳಿ ಹಬ್ಬದ ಶುಭ ಕೋರಿ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ತಮ ಸಂಸ್ಥೆಯ ಕಾರ್ಯಕ್ರಮಕ್ಕೆ ಆಹ್ವಾನಿಸುವ ಸಲುವಾಗಿ ಕಿರಣ್‌ಮಜುಂದಾರ್ ಷಾ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಹಾಗೂ ಇತರ ಸಚಿವರನ್ನು ಭೇಟಿಯಾಗಿದ್ದರು ಎನ್ನಲಾಗಿದೆ.
ರಸ್ತೆ ಗುಂಡಿಗಳ ವಿಚಾರವಾಗಿ ಕಿರಣ್ ಮಜುಂದಾರ್ ಷಾ ಹಾಗೂ ಮೋಹನ್ ದಾಸ್ ಪೈ ಇಬ್ಬರೂ ನಿರಂತರವಾಗಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದರು.
Key words: CM, DCM, meet, Businessman, Kiran Mazumdar Shah