ವಿದ್ಯಾರ್ಥಿ ಮೇಲೆ ಮುಖ್ಯಶಿಕ್ಷಕ ಹಲ್ಲೆ: ಆರೋಪಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ, ಅಕ್ಟೋಬರ್,21,2025 (www.justkannada.in): ಚಿತ್ರದುರ್ಗದ ನಾಯಕನಹಟ್ಟಿಯ ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಸೇರಿದ ಸಂಸ್ಕೃತ ವೇದ ಅಧ್ಯಯನ ಶಾಲಾ ಮುಖ್ಯ ಶಿಕ್ಷಕ  ವೀರೇಶ್ ಹಿರೇಮಠ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ಮಾಡಿ ಕಾಲಿನಿಂದ ಒದ್ದು ವಿಕೃತಿ ಮೆರೆದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆರೋಪಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಘಟನೆಯನ್ನ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆರೋಪಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದೀನಿ. ಪ್ರಕರಣವನ್ನ ಯಾವುದೇ ಕಾರಣಕ್ಕೂ ಬಿಡುವ ಮಾತೇ ಇಲ್ಲ ಎಂದಿದ್ದಾರೆ.

ಮಕ್ಕಳ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಿನ ದಿನಗಳಲ್ಲಿ ಹೊಸ ಶಾಸನ ಜಾರಿಗೆ ತರಲಾಗುತ್ತದೆ. ಯಾರ ಮೇಲೆ ದೌರ್ಜನ್ಯ ಆದರೂ ಕೂಡ ಸಹಿಸಲು ಸಾಧ್ಯವಿಲ್ಲ. ಅದರಲ್ಲೂ ಮಕ್ಕಳ ಮೇಲೆ ಈ ರೀತಿ ದೌರ್ಜನ್ಯ ಆಗಿರುವಂತದ್ದನ್ನು ನೋಡಿ ನನಗೆ ತುಂಬಾ ಸಂಕಟವಾಗಿದೆ. ಯಾರು ಇದನ್ನು ಮಾಡಿದ್ದಾರೆ ಅಂತವರು ವಿರುದ್ಧ ಕಠಿಣ ಶಿಕ್ಷೆ ಹಾಗೂ ಅವರನ್ನು ಬಿಡುವುದಿಲ್ಲ ಮಕ್ಕಳ ಆಯೋಗದಿಂದ ಕೂಡ ನಾವು ಎಫ್‌ಐಆರ್ ಮಾಡುತ್ತೇವೆ ಎಂದರು.

Key words: Headmaster, assault, student, Minister, Lakshmi Hebbalkar