ಕೇಂದ್ರ ಸಚಿವ ಹೆಚ್.ಡಿಕೆ ಭೇಟಿಯಾಗಿ ಚರ್ಚಿಸಿದ ಬಿವೈ ವಿಜಯೇಂದ್ರ

ಬೆಂಗಳೂರು, ಅಕ್ಟೋಬರ್‌, 21,2025 (www.justkannada.in): ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಕೋರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು.

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ಮಾಡಲಾಗಿದೆ. ಬಿಜೆಪಿ- ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆ ಕುರಿತು ಸಲಹೆಗಳನ್ನು ಕೇಳಿದ್ದೇನೆ, ಬೆಂಗಳೂರಿಗೆ ಸೀಮಿತವಾಗಿ ಒಂದು ಸಮನ್ವಯ ಸಮಿತಿ  ಹಾಗೂ ರಾಜ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಸಮನ್ವಯ ಸಮಿತಿ ಮಾಡುವ ಸಲಹೆಯನ್ನು ಹೆಚ್.ಡಿ ಕುಮಾರಸ್ವಾಮಿ ಅವರು ನೀಡಿದ್ದಾರೆ ಎಂದರು.

ರಾಜ್ಯ ಸರಕಾರ, ಸಚಿವರು ಅಹಂಕಾರದಿಂದ ಮೆರೆಯುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹದಗೆಟ್ಟಿದ್ದು, ಅಭಿವೃದ್ಧಿ ಇಲ್ಲದೇ ಜನರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಬೆಂಗಳೂರು ಮಹಾನಗರದ ಅವ್ಯವಸ್ಥೆಯನ್ನು ತಾವೇ ನೋಡುತ್ತಿದ್ದೀರಿ ಎಂದು ಹೇಳಿದರು.

Key words: BY Vijayendra, met, Union Minister, HDK, discussed