ನವದೆಹಲಿ,ಅಕ್ಟೋಬರ್,23,2025 (www.justkannada.in): ನಮಗಿರುವ ಮಾಹಿತಿ ಪ್ರಕಾರ ಸಿದ್ದರಾಮಯ್ಯ ತಮ್ಮ ಸಿಎಂ ಹುದ್ದೆ ಬಿಟ್ಟುಕೊಡುತ್ತಾರೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ಈ ವರ್ಷ ಭಾರೀ ಮಳೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆಹಾನಿಯಾಗಿದೆ. ಜನರಿಗೆ ರಸ್ತೆಗಳಲ್ಲಿ ಸರಿಯಾಗಿ ಸಂಚಾರ ಮಾಡಲಾಗುತ್ತಿಲ್ಲ, ಇಂತಹ ವಿಷಯಗಳ ಬಗ್ಗೆ ಗಮನಹರಿಸುವುದು ಬಿಟ್ಟು ಸಿಎಂ ಬದಲಾವಣೆ ಬಗ್ಗೆ ಪದೇ ಪದೇ ಹೇಳಿಕೆ ಕೊಡುತ್ತಾ ಕಾಲ ಕಳೆಯುತ್ತಿದ್ದೀರಿ ಎಂದು ಕಿಡಿಕಾರಿದರು.
ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ನಾಯಕರು ರಾಜ್ಯದ ಜನತೆ ಮುಂದೆ ಹುಸಿಬಾಂಬ್ ಗಳನ್ನು ಹಾಕುವುದನ್ನು ಬಿಟ್ಟು ಜನರ ಸಮಸ್ಯೆಗಳು, ಕೆಲಸಗಳತ್ತ ಗಮನಹರಿಸಬೇಕು ರಾಜ್ಯದ ಜನರನ್ನು ಮರುಳು ಮಾಡಲು ನೋಡಬೇಡಿ ಎಂದು ವಾಗ್ದಾಳಿ ನಡೆಸಿದರು.
ನಮಗಿರುವ ಮಾಹಿತಿ ಪ್ರಕಾರ ಸಿದ್ದರಾಮಯ್ಯನವರು ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಹುದ್ದೆ ಬಿಟ್ಟುಕೊಡುತ್ತಾರೆ ಎಂದು ಜನ ಮಾತನಾಡುವುದನ್ನು ನಾವು ನೀವು ಕೇಳಿದ್ದೇವೆ. ಇದೆಲ್ಲದರ ಮಧ್ಯೆ ಹುಸಿಬಾಂಬ್ ಗಳನ್ನು ಹಾಕಿಕೊಂಡು ರಾಜ್ಯದ ಜನತೆಯನ್ನು ಕತ್ತಲೆ ಕೋಣೆಯಲ್ಲಿ ಇರಿಸುವ ಕೆಲಸ ಬಿಟ್ಟುಬಿಡಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹರಿಹಾಯ್ದರು.
Key words: Siddaramaiah, CM, post, Union Minister, V. Somanna