ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ತೀರ್ಮಾನ ಅಂತಿಮ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಅಕ್ಟೋಬರ್,23,2025 (www.justkannada.in):  ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್​​ ನಿರ್ಧಾರವೇ ಅಂತಿಮ ಎಂದು ಗೃಹ ಸಚಿವ ಜಿ.ಪರಮೇಶ್ವರ್  ತಿಳಿಸಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಬಗ್ಗೆ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೈಕಮಾಂಡ್​ ಸಂದರ್ಭ ಬಂದಾಗ ಸಿಎಲ್​ ಪಿ ಸಭೆ ಕರೆದು ಶಾಸಕರ ಅಭಿಪ್ರಾಯ ಕೇಳುತ್ತಾರೆ. ಆ ನಂತರ ಯಾರು?, ಏನು? ಎಂಬ ಘೋಷಣೆ ಆಗುತ್ತದೆ. ಇದು ನಮ್ಮಲ್ಲಿರುವ ಪದ್ಧತಿ ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಸಂಘಸಂಸ್ಥೆಗಳು ಕಾರ್ಯಕ್ರಮ ಆಯೋಜಿಸಲು ಅನುಮತಿ ಪಡೆಯಬೇಕೆಂಬ ನಿರ್ಣಯ ಕುರಿತು ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ್, ನಮ್ಮ ಸುತ್ತೋಲೆಯಲ್ಲಿ ಆರ್‌ಎಸ್‌ಎಸ್‌ ಪದ ಬಂದಿಲ್ಲ. ಆರ್‌ಎಸ್‌ಎಸ್‌  ಗುರಿಯಾಗಿಸಿ ಈ ಆದೇಶ ಹೊರಡಿಸಿಲ್ಲ. ಇದು ಎಲ್ಲರಿಗೂ ಅನ್ವಯವಾಗುತ್ತದೆ. ಶಾಲಾ, ಕಾಲೇಜಿಗೆ ತೊಂದರೆ ಆಗಬಾರದು. 2013ರಲ್ಲಿ  ಜಗದೀಶ್ ಶೆಟ್ಟರ್ ಆದೇಶ ಮಾಡಿದ್ದರು. ಅದನ್ನೇ ಪುನರ್ ಪರಿಶೀಲನೆ ಮಾಡಿದ್ದೇವೆ ಎಂದರು.

Key words: Party, decision, CM change, final, Home Minister, Parameshwar